ಮುಂಜಾನೆ ಎದ್ದು ಸ್ನಾನ ಮಾಡಿ ಬಂದು ಮೊಬೈಲ್ ನೋಡಿದರೆ ಆರು ಮಿಸ್ಸ್ಡ್ ಕಾಲ್ಸ್ ಇದ್ವು. ಕರೆ ಮಾಡಿದೆ. ಆಚೆಯಿಂದ "ಅಕ್ಕ ಇವತ್ತು ಏಕ್ಸಾಮ್ ಬರೀಲೀಕ್ಕೆ ಬರ್ತಿದ್ದೀರಿ ತಾನೇ ?" ಎಂದು ಹುಡುಗಿ ಗಾಬರಿ ಸ್ವರದಲ್ಲಿ ಕೇಳಿದಳು. "ಹೌದು ! ಹೊರಡ್ತಿದ್ದೀನಿ." ಎಂದು ಸಮಾಧಾನಿಸಿ ಫೋನ್ ಪಕ್ಕಕ್ಕಿಟ್ಟು, ಬೇಗನೆ ತಯಾರಾಗಿ ರೂಮಿನಿಂದ ಹೊರಡಿದೆ. ಅದು ೪೫ ನಿಮಿಷಗಳ ಪ್ರಯಾಣ. ಅಷ್ಟರಲ್ಲಿ ಮೂರ್ನಾಲ್ಕು ಸಲ ನಾನು ಎಲ್ಲಿದ್ದೀನಿ ಎಂದು ವಿಚಾರಿಸಲು ಕರೆ ಮಾಡಿದ್ದಳು. ೮:೪೫ ಗೆ ತಲುಪಬೇಕಿತ್ತು. ೮:೩೦ ಗೆ ನೇ ತಲುಪಿದ್ದೆ. ಕಾಲೇಜು ಹೊರಗೆ ತನ್ನ ಗೆಳತಿಯೊಟ್ಟಿಗೆ ಕಾದು ನಿಂತಿದ್ದಳು. "ಹಾಯ್, ಸ್ಪೂರ್ತಿ ತಾನೇ ? " ಅಂದೆ. "ಹೌದಕ್ಕಾ, ಬಂದ್ರಾ. ಹೇಗೆ ಪರಿಚಯವಾಯ್ತು . ನಾವು ಎಂದೂ ಭೇಟಿಯಾಗಿಲ್ಲ ಅಲ್ವಾ" ಎಂದಾಗ, ಅಲ್ಲಿರುವ ಜನರಿಗಿಂತ ಭಿನ್ನವಾಗಿ ಅವಳು ಇದ್ದುದ್ದರಿಂದ ಪರಿಚಯವಾಯ್ತು ಎಂದು ಹೇಳಲು ಮನಸ್ಸಾಗಲಿಲ್ಲ. ಸುಮ್ನೆ ಅವಳ ಬೆನ್ನು ತಟ್ಟಿ ನಕ್ಕು ಬಿಟ್ಟೆ. "ಸಾರೀ ಅಕ್ಕ, ತುಂಬಾ ಸಲ ಕಾಲ್ ಮಾಡಿದೆ. ಮೊನ್ನೆ ನನ್ನ ಗೆಳತಿಗೆ ಒಬ್ರು ಏಕ್ಸಾಮ್ ಬರೀಲಿಕ್ಕೆ ಬರ್ತೇನೆ ಹೇಳಿ ಬಂದಿರ್ಲಿಲ್ಲ. ಅದ್ಕೆ ಗಾಬರಿಯಾಗಿದ್ದೆ " ಅಂದ್ಲು. ಕಾಲೇಜು ಒಳಗೆ ಹೋಗಿ ರೂಮ್ ಹುಡುಕಿ ಅಲ್ಲಿ ಕೂತು ಮಾತಾಡಲು ಶುರು ಮಾಡಿದ್ವಿ. ಸ್ವಲ್ಪ ಹೊತ್ತಾದ ನಂತರ ಸ್ಪೂರ್ತಿ ಹಾಗು ಅವಳ ಗೆಳತಿಯಂತೆ ಏಳೆಂಟು ಜನ ತಮ್ಮ ಬ
ಅಮ್ತಹ್ಕರಣ....
Feelings when written are better delivered than spoken.