ಆವತ್ತು ಎಂದಿನಂತೆ ಕಾಲೇಜಿಗೆ ಹೋಗಲು ಬಸ್ಸಿಗೆ ಕಾಯುತ್ತಿದ್ದೆ. ಅದು ಯಾವತ್ತೂ ಮರೆಯದ ದಿನವಾಗುತ್ತದೆಂದು ಕನಸಲ್ಲೂ ಎಣಿಸಿರಲಿಲ್ಲ . ತಪ್ಪು ಎನ್ನುವುದಕ್ಕಿಂತ ಏನೋ ಪಾಪ ಮಾಡಿದ್ದೇನೆ ಎಂಬ ಭೀತಿ ಇಂದಿಗೂ ನನ್ನನ್ನು ಕಾಡುತ್ತಿದೆ. ನನ್ಮುಂದೆ ಬಸ್ಸೊಂದು ನಿಂತಿತ್ತು. ಶಾಲಾ ಮಕ್ಕಳು ಪ್ರವಾಸಕ್ಕೆ ಹೊರಟಿರುವುದೆಂದು ಬಸ್ಸು ನೋಡಿದಾಗ ತಿಳಿಯಿತು. ನಾನೋ ಇದನೆಲ್ಲ ನೋಡುತಿದ್ದರು ನನ್ನ ಮನಸ್ಸು ಏನೋ ಬೇರೆ ಕಡೆಯೇ ತೇಲಿದಂತ ಅನುಭವ. ಆ ಬಸ್ಸಿನ ಕಿಟಕಿಯಿಂದ ಸುಮಾರು ಇಪ್ಪತೆಂಟು ಮೂವತ್ತು ವರ್ಷದ ಹುಡುಗಿಯೊಬ್ಬಳು ನನ್ನ ಕಡೆ ನೋಡಿ ಕೈ ಬೀಸಿದಂತೆ ಆಯ್ತು. ಆದರೆ ಯಾರೆಂಬುದು ನನಗೆ ತಿಳಿಯಲೇ ಇಲ್ಲ. ನನ್ನ ನೋಡಿ ಕೈ ಬೀಸಿದಳೋ ಅಲ್ಲ ಪಕ್ಕದಲ್ಲಿರುವವರಿಗೆ ಸನ್ನೆ ಮಾಡುತಿದ್ದಳೊ ತಿಳಿಯಲಿಲ್ಲ.ಆಚೆ ಈಚೆ ನೋಡಿದರೆ ಯಾರು ಅವಳಿಗೆ ಪ್ರತಿಕ್ರಿಯಿಸುತ್ತಿರಲಿಲ್ಲ. ಮತ್ತೆ ಅವಳು ನನ್ನನ್ನೇ ನೋಡ್ತಿದಂತೆ ಅನಿಸಿತು. ಏನು ಯೋಚಿಸುತಿದ್ದೆನೋ ದೇವರಿಗೆ ಗೊತ್ತು. ನಾನು ಅವಳಿಗೆ ಪ್ರತಿಕ್ರಿಯಿಸಲೇ ಇಲ್ಲ. ನಾನು ಅವಳಿಗೆ ಕೈ ಬೀಸುತಿದ್ದರೆ ನನ್ನ ಗಂಟೇನು ಹೋಗುತಿತ್ತು ಎಂದು ಇವತ್ತಿನವರೆಗೂ ನನ್ನನು ನಾನು ಎಷ್ಟು ಬಾರಿ ಬೈದುಕೊಂಡಿದ್ದೇನೋ ಏನೋ. ಸ್ವಲ್ಪ ಹೊತ್ತಾದ ನಂತರ ಯಾರೋ ಬಸ್ಸಿನಿಂದ ಇಳಿದಂತಾಯ್ತು. ಇಳಿದವಳನ್ನು ನೋಡಿ ಅವಾಕ್ಕಾದೆ . ನಾನು ಕಲಿತ ಶಾಲೆಯಲ್ಲೇ ನನ್ನ ಕಸಿನ್ ಓದುತ್ತಿದ್ದಳು . ಅ...
Feelings when written are better delivered than spoken.